ಬೆಂಗಳೂರು (13-11-2023): (GPTR-2022) ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕೌನ್ಸಲಿಂಗ್ನಲ್ಲಿ ಸ್ಥಳ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ದಾಖಲೆಗಳ ನೈಜತೆಯ ಪರಿಶೀಲನಾ ಕಾರ್ಯವನ್ನು ತ್ವರಿತಗೊಳಿಸುವ ಬಗ್ಗೆ ಸುತ್ತೋಲೆ. ಆಯಾ ಜಿಲ್ಲಾ ನೇಮಕಾತಿ ಪ್ರಾಧಿಕಾರವಾದ ಉಪನಿರ್ದೇಶಕರು (ಆಡಳಿತ) ರವರು ಈ ಬಗ್ಗೆ ವೈಯಕ್ತಿಕ ಗಮನ ಹರಿಸಿ, ಬಾಕಿ ಇರುವ ದಾಖಲೆಗಳ ನೈಜತೆ ಪರಿಶೀಲನೆ ಹಾಗೂ ಜಾತಿ, ಆದಾಯ ಪ್ರಮಾಣ ಪತ್ರದ ಸಿಂಧುತ್ವ ಕಾರ್ಯದ ಅನುಪಾಲನೆಯ ಜೊತೆಗೆ ತಮ್ಮ ಜಿಲ್ಲೆಯ ವಿವಿಧ ಪ್ರಾಧಿಕಾರಗಳಲ್ಲಿ ಬಾಕಿ ಇರುವ ಇತರೆ ಜಿಲ್ಲೆಗಳ ಪ್ರಮಾಣ ಪತ್ರಗಳ ನೈಜತ ಕಾರ್ಯದ ಬಗ್ಗೆಯೂ ಪ್ರತಿನಿತ್ಯ ಅನುಪಾಲನೆ ಮಾಡಿ ಸಂಬಂಧಪಟ್ಟ ಜಿಲ್ಲೆಗಳಿಗೆ ವರದಿ ರವಾನೆ ಆಗುವಂತೆ ನೋಡಿಕೊಳ್ಳಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಸುತ್ತೋಲೆಯನ್ನು ಡೌನ್ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ