ಬೆಂಗಳೂರು (25-05-2025): ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಪ್ರಕಟಣೆ ಗಮನಿಸಿ. ಈ ಕೆಳಗಿನ ಲಿಂಕ್ ಮೇಲೆ ಒತ್ತಿ.