ಬೆಂಗಳೂರು (21-11-2023): ಪ್ರತೀ ಶೈಕ್ಷಣಿಕ ವರ್ಷ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ದೇಶದಾದ್ಯಂತ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದ್ದು, ಷರತ್ತುಗಳ ಅನ್ವಯ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅನುಮತಿ ನೀಡಲು ಸೂಚಿಸಿದೆ. ಉಲ್ಲೇಖಿತ ಸುತ್ತೋಲೆಯ ಷರತ್ತು 8 ರ ಜೊತೆಗೆ ಸದರಿ ಶೈಕ್ಷಣಿಕ ಪ್ರವಾಸವನ್ನು ಭಾರತೀಯ ರೈಲ್ವೆಯ ರೈಲುಗಳಲ್ಲಿಯೂ ಹಮ್ಮಿಕೊಳ್ಳಬಹುದು ಎಂದು ಇಲಾಖೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರವಾಸಕ್ಕೆ ಸಂಬಂಧಿಸಿದಂತೆ ಇರುವ ಇಲಾಖೆಯ ವಿವಿಧ ಸುತ್ತೋಲೆಗಳನ್ನು ಡೌನ್ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಒತ್ತಿ